ನವದೆಹಲಿ, ಡಿ. 11 (DaijiworldNews/AK): ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನದಲ್ಲಿ, ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಯುತ್ತಿದೆ. ವಿರೋಧ ಪಕ್ಷಗಳು ಎಸ್ಐಆರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ಈ ನಡುವೆ ದೇಶದ ಪ್ರಧಾನಿ ಮತ್ತು ಮುಖ್ಯಮಂತ್ರಿಗಳನ್ನು ನುಸುಳುಕೋರರು ಆಯ್ಕೆ ಮಾಡುವುದಿಲ್ಲ, ಆದ್ದರಿಂದ ಎಸ್ಐಆರ್ ಅಗತ್ಯ ಎಂದು ಆಡಳಿತ ಪಕ್ಷ ವಾದಿಸುತ್ತಿದೆ.

ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ವಿಶೇಷ ತೀವ್ರ ಪರಿಷ್ಕರಣೆಯ ಅಗತ್ಯವಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ರಾಜೀವ್ ಗಾಂಧಿ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹೀಗೆ ಬರೀ ನಕಲಿ ಗಾಂಧಿಗಳದ್ದೇ ಅಧಿಕಾರ ಮುಂಚೂಣಿಯಲ್ಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದೊಳಗೇ ಮೊದಲು ಎಸ್ಐಆರ್ ನಡೆಯಬೇಕಿದೆ ಎಂದು ಜೋಶಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದೊಳಗೆ ವಿಶೇಷ ತೀವ್ರ ಪರಿಷ್ಕರಣೆಯ ಅವಶ್ಯಕತೆಯಿದೆ. ಇದು ಸಂಭವಿಸಿದರೆ ಮಾತ್ರ ಕಾಂಗ್ರೆಸ್ ಪಕ್ಷ ಉಳಿಯುತ್ತದೆ, ಇಲ್ಲದಿದ್ದರೆ, ಅದು ನಾಶವಾಗುತ್ತದೆ ಎಂದು ಅವರು ಹೇಳಿದರು. ಲೋಕಸಭೆಯಲ್ಲಿ ಈ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೇಳಿಕೆ ಬಂದಿದೆ.