ನವದೆಹಲಿ, ಡಿ. 16 (DaijiworldNews/AA): ಉತ್ತರ ಭಾರತದಲ್ಲಿ ಚಳಿಗಾಲದಲ್ಲಿ ಬೆಳಗಿನ ವೇಳೆ ಆಗಾಗ್ಗೆ ದಟ್ಟವಾದ ಮಂಜು ಕವಿದಿರುತ್ತದೆ. ಇದು ವಿಮಾನಗಳ ಚಲನೆಯನ್ನು ನಿಧಾನಗೊಳಿಸುತ್ತದೆ. ಇದೀಗ ಕಡಿಮೆ ಗೋಚರತೆಯ ಹಿನ್ನೆಲೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಒಟ್ಟು 49 ನಿರ್ಗಮನ ಮತ್ತು 77 ಆಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಗೋ ಏರ್ಲೈನ್ಸ್ ತನ್ನ ನೆಟ್ವರ್ಕ್ನಾದ್ಯಂತ 110 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. "ಕಡಿಮೆ ಗೋಚರತೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಒಟ್ಟು 49 ನಿರ್ಗಮನ ಮತ್ತು 77 ಆಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ" ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಚಳಿಗಾಲದಲ್ಲಿ ಹವಾಮಾನ ಸಂಬಂಧಿತ ಅಡೆತಡೆಗಳು ಮುಂದುವರಿಯುವ ನಿರೀಕ್ಷೆಯಿರುವುದರಿಂದ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಮೊದಲು ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಲಾಗಿದೆ.