ಬೆಳಗಾವಿ, ಡಿ. 17 (DaijiworldNews/AA): ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತನಗೆ ಜವಾಬ್ದಾರಿಯ ಅರಿವಿದ್ದು, ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಶೀಘ್ರದಲ್ಲಿ ಪರಿಹರಿಸುವುದಾಗಿ ಹೇಳಿದ್ದಾರೆ. ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ ಅಥವಾ ಯಾವುದೇ ದುರುಪಯೋಗವಾಗಿಲ್ಲ ಎಂದು ಹೇಳಿದರು.
ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲಾಗುವುದು. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಅವರು ತಿಳಿಸಿದ್ದಾರೆ.