ನವದೆಹಲಿ,ಡಿ. 23(DaijiworldNews/ AK): ಬೆಂಗಳೂರು ಹಾಗೂ ಕರವಾಳಿ ಜಿಲ್ಲೆಗಳಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್-ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ಅತಿವೇಗದ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.
ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.
ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.