ಬೆಂಗಳೂರು, ಡಿ. 23 (DaijiworldNews/AA): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣ ದಾಖಲಾಗಿ ಐದು ತಿಂಗಳು 10 ದಿನ ಆಗಿದೆ. 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಏಳರಿಂದ ಎಂಟು ಆರೋಪಿಗಳು ಕೊಲೆ ಸಂದರ್ಭದಲ್ಲಿ ಅಪರಿಚಿತರರು ಇದ್ದಾರೆ. ಆದರೆ, ಬೈರತಿ ಬಸವರಾಜ್ರನ್ನ ಎ-5 ಎಂದು ಎಫ್ಐಆರ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಪೊಲೀಸರು ಅನುಮಾನದ ಮೇರೆಗೆ ಎಫ್ಐಆರ್ನಲ್ಲಿ ಹೆಸರು ಸೇರಿಸಿದ್ದಾರೆ. ಸಿಐಡಿಗೆ ಪ್ರಕರಣ ವರ್ಗಾವಣೆ ಆದ ನಂತರ ನಿನ್ನೆಯವರೆಗೂ ಸಿಐಡಿ ನೋಟಿಸ್ ನೀಡಿಲ್ಲ, ಸಮನ್ಸ್ ಕೊಟ್ಟಿಲ್ಲ. ಹೇಗೆ ವಿಚಾರಣೆಗೆ ಹಾಜರಾಗುವುದು? ಎಫ್ಐಆರ್ನಲ್ಲಿ ಹೆಸರು ಸೇರಿಸುವುದು ಬಿಟ್ಟು ಬೇರೆ ಏನ್ ಮಾಡಿದ್ದಾರೆ? ಎಂದು ಬೈರತಿ ಪರ ವಕೀಲರು ಪ್ರಶ್ನಿಸಿದ್ದಾರೆ.
ಐದು ತಿಂಗಳು ಸುಮ್ಮನಿದ್ದು ಈಗ ಕಸ್ಟೋಡಿಯಲ್ ಇಟ್ರಾಗೇಷನ್ ಅವಶ್ಯಕತೆ ಇದೆ ಎಂದು ಹೇಳುತ್ತಾರೆ. ಎಫ್ಐಆರ್ ದಾಖಲು ಮಾಡಿದ ನಂತರ ಕೋಕಾ ಕಾಯ್ದೆ ಜಾರಿ ಮಾಡುತ್ತಾರೆ. ಬೈರತಿ ಬಸವರಾಜ್ ಯಾವುದೇ ತನಿಖೆಗೂ ಸಿದ್ಧ, ಯಾವತ್ತು ಕರೆದರೂ ತನಿಖೆಗೆ ಬರುತ್ತಾರೆ ಎಂದು ವಕೀಲರು ವಾದಿಸಿದ್ದಾರೆ.
ಹೈಕೋರ್ಟ್ ಆದೇಶದ ಮಾಹಿತಿ ತಿಳಿದು ಕಲಾಪಕ್ಕೆ ಹೋಗಿದ್ದವರು ಡಿ.18 ರಿಂದ ಎಸ್ಕೇಪ್ ಆಗಿದ್ದಾರೆ. ಸದನದಲ್ಲಿ ಇರಬೇಕಾದ ಶಾಸಕರು ಎಲ್ಲಿ ಹೋದ್ರು? ಕೊಲೆ ಕೇಸ್ನಲ್ಲಿ ಆರೋಪಿಗೆ ನೋಟಿಸ್ ಕೊಡುವ ಅಗತ್ಯ ಇಲ್ಲ. ಎ1 ರಿಂದ ಎ5 ತನಕ ಇರುವ ಆರೋಪಿಗಳು ಒಳಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ. ಎ೧ ಜಗದೀಶ್ ಎ5 ಬೈರತಿ ಬಸವರಾಜ್ ಸಂಪರ್ಕದಲ್ಲಿದ್ದಾರೆ. ಎ1, ಎ5 ಕುಂಭಮೇಳಕ್ಕೆ ಹೋಗಿದ್ದಾರೆ ಎಂದು ದಾಖಲೆ ಸಲ್ಲಿಕೆಯಾಗಿದೆ ಎಂದು ಸಿಐಡಿ ಪರ ಎಸ್ಪಿಪಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದಾರೆ.
ಬೈರತಿಗೂ ಕೊಲೆಯಾದವನಿಗೆ ದೇವಸ್ಥಾನದ ಜಾಗದ ವಿಚಾರವಾಗಿ ಗಲಾಟೆ ಆಗಿದೆ. ಬೈರತಿ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಆದರೆ, ಕಣ್ಣಿಗೆ ಕಾಣಲ್ಲ. ಅವಲಹಳ್ಳಿ ಜಾಗದ ವಿಚಾರವಾಗಿ ಎ೫ ಕೊಲೆಯಾದ ವ್ಯಕ್ತಿಯ ಮೇಲೆ ದೂರು ದಾಖಲಿಸಿದ್ದ. ಎ20, ಎ5 ಆಪ್ತ ಸಹಾಯಕರೇ ಜಾಗದ ಗಲಾಟೆ ವಿಚಾರಕ್ಕೆ ಹೋಗ್ತಾರೆ. ಎ1 ಬೈರತಿಗೆ ವಿಷಯ ತಿಳಿಸಿ ವಿದೇಶಕ್ಕೆ ಹೋಗಿದ್ದಾರೆ. ಇದು ಟವರ್ ಲೊಕೇಷನ್ನಲ್ಲಿ ತಿಳಿದಿದೆ. ಎ1 ವಿದೇಶಕ್ಕೆ ಎಸ್ಕೇಪ್ ಆಗಲು ಎ5 ಸಹಾಯ ಮಾಡಿದ್ದಾರೆ. ಎ5, ಇತರೆ ಆರೋಪಿಗಳಿಗೆ ಹೋಗಿ ಸರೆಂಡರ್ ಆಗಿ ಅಂತಾರೆ ಕಾಲ್ ರೆಕಾರ್ಡ್ಸ್ ಇದೆ. ನಾವು ತಾಂತ್ರಿಕ ಸಾಕ್ಷ್ಯಗಳಾದ ಸಿಡಿಆರ್, ಟವರ್ ಲೊಕೇಷನ್ ನೀಡುತ್ತೇವೆ ಎಂದು ಅವರು ಟವರ್ ಲೊಕೇಷನ್, ಸಿಡಿಆರ್ ದಾಖಲೆ ಸಲ್ಲಿಸಿದ್ದಾರೆ.