ಪಾಟ್ನಾ, ಮಾ. 04 (DaijiworldNews/AA): ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಸಿಎಂ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗಲಿರುವ ಹಿನ್ನೆಲೆ ಅವರ ಪುತ್ರ ನಿಶಾಂತ್ ಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತಮ್ಮ ಉತ್ತರಾಧಿಕಾರಿಯನ್ನು ಅಖಾಡಕ್ಕಿಳಿಸಲು ಸಜ್ಜಾಗಿರುವ ನಿತೀಶ್ ಕುಮಾರ್ ಅಂದುಕೊಂಡಂತೆ ನಡೆದರೆ ಅವರ ಪುತ್ರ ರಾಜ್ಯದ ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಈ ಮೂಲಕ ಅವರ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕೀಯಕ್ಕೆ ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಇನ್ನು ನಿತೀಶ್ ಅವರ ಸ್ಥಾನಕ್ಕೆ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ತನ್ನದೇ ಪಕ್ಷದ ನಾಯಕರನ್ನು ನೇಮಿಸಲಿದೆ.
ನಿತೀಶ್ ಕುಮಾರ್ ಅವರು ದಾಖಲೆಯ 10 ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುತ್ತಾರೆ. ಜಿತನ್ ರಾಮ್ ಮಾಂಝಿ ಮುಖ್ಯಮಂತ್ರಿಯಾಗಿದ್ದ ಅಲ್ಪಾವಧಿಯನ್ನು ಹೊರತುಪಡಿಸಿ, 2015 ರಿಂದ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾರೆ.