ನವದೆಹಲಿ ಮಾ. 05 (DaijiworldNews/AK): ಮಧ್ಯಪ್ರಾಚ್ಯದ ಸಂಘರ್ಷದಿಂದ ತೈಲ ಪೂರೈಕೆ ಮಾರ್ಗ ಹಾರ್ಮುಜ್ ಜಲಸಂಧಿ ಬಂದ್ ಆಗಿರುವುದು ಭಾರತೀಯ ಸರಕು ಸಾಗಣೆ ವಲಯಕ್ಕೆ ಆರ್ಥಿಕ ಅಪಾಯ ಉಂಟು ಮಾಡಿದೆ.

27 ಭಾರತೀಯ ಹಡಗುಗಳು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದು, 10,000 ಕೋಟಿಗೂ ಅಧಿಕ ಮೌಲ್ಯದ ಸರಕು ಅಪಾಯದಲ್ಲಿದೆ. ಇದರಿಂದ ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಗಳು ತಿಳಿಸಿವೆ.
ಸುಮಾರು 95 ಮಿಲಿಯನ್ (9.5 ಕೋಟಿ) ಬ್ಯಾರೆಲ್ ರಷ್ಯನ್ ಕಚ್ಚಾ ತೈಲ ಈಗಾಗಲೇ ಭಾರತೀಯ ಸಮುದ್ರ ಗಡಿಯ ಸಮೀಪದಲ್ಲಿರುವ ಹಡಗುಗಳಲ್ಲಿ ಲಭ್ಯವಿದ್ದು, ಇದು ಕೆಲವು ವಾರಗಳಲ್ಲಿ ಭಾರತಕ್ಕೆ ತಲುಪುವ ಸಾಧ್ಯತೆ ಇದೆ. ಈ ಮೂಲಕ ಮಧ್ಯಪ್ರಾಚ್ಯದಿಂದ ಉಂಟಾದ ಪೂರೈಕೆ ವ್ಯತ್ಯಯ ಭಾಗಶಃ ಸಮತೋಲನಗೊಳಿಸಲು ಭಾರತಕ್ಕೆ ಸಾಧ್ಯವಾಗಬಹುದು ಎನ್ನಲಾಗುತ್ತಿದೆ.