ಬೆಂಗಳೂರು, ಏ. 17 (DaijiworldNews/AA): ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಇದರ ನಡುವೆ ಏ.21ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಏ.20ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಏ.21ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಸಾಮಾನ್ಯಕ್ಕಿಂತ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ. ಇನ್ನು ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಮುಂದಿನ ತಿಂಗಳು ಇನ್ನಷ್ಟು ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.