ನವದೆಹಲಿ, ಏ. 17 (DaijiworldNews/AA): ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದ್ವಿ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ಆದೇಶಿಸಿದೆ.
ರಾಹುಲ್ ಗಾಂಧಿ ಅವರು ಪ್ರಸ್ತುತ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಕೋರ್ಟ್ ಪುರಸ್ಕರಿಸಿದ್ದು, ಪ್ರಕರಣ ದಾಖಲಿಸಲು ಸೂಚಿಸಿದೆ.