ನವದೆಹಲಿ,ಮೇ. 16 (DaijiworldNews/AK): ಮಾದಕ ದ್ರವ್ಯ ನಿಯಂತ್ರಣ ಘಟಕವು ಸುಮಾರು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್ʼ ಅನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ʻಡ್ರಗ್ ಮುಕ್ತ ಭಾರತʼ ನಿರ್ಮಾಣ ಮಾಡಲು ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ.
ಆಪರೇಷನ್ ರೇಜ್ಪಿಲ್ ಮೂಲಕ ನಮ್ಮ ಏಜೆನ್ಸಿಗಳು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್ʼ ಎಂದು ಕರೆಯುವ ಕ್ಯಾಪ್ಟಗನ್ ಸರನ್ನು ಮೊದಲ ಬಾರಿಗೆ ವಶಪಡಿಸಿಕೊಂಡಿವೆ. ಈ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರಾಚ್ಯಕ್ಕೆ ಸಾಗಿಸಲು ಉದ್ದೇಶಿಸಲಾಗಿದ್ದ ಮಾದಕ ವಸ್ತುಗಳನ್ನು ಭೇದಿಸುವುದು ಮತ್ತು ವಿದೇಶಿ ಪ್ರಜೆಯನ್ನ ಬಂಧಿಸಿರುವುದು ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆಗೆ ನಮ್ಮ ಬದ್ಧತೆಯ ಉಜ್ವಲ ಉದಾಹರಣೆಗಳಾಗಿವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.