ಬೆಂಗಳೂರು,ಮೇ. 16 (DaijiworldNews/AK): ಲೋಕಸಭಾ ಕಾರ್ಯಾಲಯದ ಜಂಟಿ ಸಂಸದೀಯ ಸಮಿತಿಯು ಇಂದು ನಗರದ ತಾಜ್ ವೆಸ್ಟ್ ಎಂಡ್ ಗೆ ಭೇಟಿ ನೀಡಿತ್ತು. ಒಂದು ದೇಶ ಒಂದೇ ಚುನಾವಣೆ ಕುರಿತ ಸಾಂವಿಧಾನಿಕ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಜೊತೆ ಸಮಿತಿಯು ಚರ್ಚೆ ನಡೆಸಿತು.

‘ಒಂದು ದೇಶ ಒಂದು ಚುನಾವಣೆ’ ಜಾರಿಗೆ ತರುವಂತೆ ರಾಜ್ಯ ಬಿಜೆಪಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಕುರಿತ ಚರ್ಚೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹಾಗೂ ಪಕ್ಷದ ಪ್ರಮುಖ ನಾಯಕರು ಭಾಗಿಯಾದರು.
ಸಂಸದರಾದ ಪಿ.ಸಿ.ಮೋಹನ್, ಯಧುವೀರ್ ಒಡೆಯರ್, ಡಾ. ಸಿ.ಎನ್. ಮಂಜುನಾಥ್, ಶಾಸಕರಾದ ಎಲ್. ರವಿ ಸುಬ್ರಹ್ಮಣ್ಯ, ಸುರೇಶ್ ಗೌಡ, ಜ್ಯೋತಿ ಗಣೇಶ್, ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಎಸ್.ನವೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.
ಭಾರತಕ್ಕೆ ಪ್ರವೇಶಿಸುವ ಅಥವಾ ನಮ್ಮ ಪ್ರದೇಶವನ್ನ ಸಾರಿಗೆ ಮಾರ್ಗವಾಗಿ ಬಳಸಿಕೊಂಡು ದೇಶದಿಂದ ಹೊರಹೋಗುವ ಪ್ರತಿಯೊಂದು ಗ್ರಾಂ ಮಾದಕ ವಸ್ತುಗಳನ್ನೂ ನಾವು ನಿಗ್ರಹಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಶಪಥ ಮಾಡಿದ್ದಾರೆ. ಅಲ್ಲದೇ ಈ ಮಹತ್ತರ ಕಾರ್ಯಾಚರಣೆ ನಡೆಸಿದ ಎನ್ಸಿಬಿ ಯೋಧರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.