ನವದೆಹಲಿ, ಮೇ. 17 (DaijiworldNews/AA): ಮಧ್ಯಪ್ರಾಚ್ಯ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ 20,000 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಸುರಕ್ಷಿತವಾಗಿ ಗುಜರಾತ್ನ ಕಾಂಡ್ಲಾದ ದೀನ್ದಯಾಳ್ ಬಂದರನ್ನು ತಲುಪಿದೆ.

ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ಸಿಮಿ ಎಲ್ಪಿಜಿ ಟ್ಯಾಂಕರ್ ಮೇ 13 ರಂದು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತಕ್ಕೆ ಆಗಮಿಸಿದೆ. ಸುಮಾರು 20,000 ಟನ್ ದ್ರವ ಪ್ರೊಪೇನ್ ಮತ್ತು ಬ್ಯುಟೇನ್ ಸಾಗಿಸುತ್ತಿದ್ದ ಈ ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು, ಎಂಟು ಉಕ್ರೇನಿಯನ್ನರು ಮತ್ತು 13 ಫಿಲಿಪಿನೋ ಸಿಬ್ಬಂದಿ ಸೇರಿದ್ದಾರೆ.
ಪ್ರಸ್ತುತ ಮೇಲ್ವಿಚಾರಣೆಯಡಿಯಲ್ಲಿ ಹಾರ್ಮುಜ್ ಜಲಸಂಧಿ ದಾಟಿದ ೧೧ನೇ ಎಲ್ಪಿಜಿ ಟ್ಯಾಂಕರ್ ಇದಾಗಿದೆ. ಇದು ಭಾರತದ ಇಂಧನ ಪೂರೈಕೆಗೆ ಮಹತ್ವದ ಬೆಳವಣಿಗೆಯಾಗಿದೆ.