ತಿರುವನಂತಪುರಂ, ಮೇ. 18 (DaijiworldNews/TA): ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಹಾಗೂ 20 ಮಂದಿ ಸಚಿವರಿಗೆ ಪದ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು.

ಇತ್ತೀಚೆಗೆ ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ, ವಿಡಿ ಸತೀಶನ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿತ್ತು. ಪ್ರಮಾಣವಚನ ಸಮಾರಂಭ ತಿರುವನಂತಪುರಂನಲ್ಲಿ ಭಾರೀ ಜನಸ್ತೋಮದ ನಡುವೆ ನೆರವೇರಿತು.
ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ನ 11 ಮಂದಿಗೆ ಸ್ಥಾನ ದೊರೆತಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಐವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಕೇರಳ ಕಾಂಗ್ರೆಸ್-ಜೋಸೆಫ್ನ ಮಾನ್ಸ್ ಜೋಸೆಫ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಶಿಬು ಬೇಬಿ ಜಾನ್, ಕೇರಳ ಕಾಂಗ್ರೆಸ್-ಜಾಕೋಬ್ನ ಅನೂಪ್ ಜಾಕೋಬ್ ಹಾಗೂ ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷದ ಸಿಪಿ ಜಾನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಕಾಂಗ್ರೆಸ್ನಿಂದ ರಮೇಶ್ ಚೆನ್ನಿತ್ತಲ್, ಸನ್ನಿ ಜೋಸೆಫ್, ಕೆ. ಮುರಳೀಧರನ್, ಎ.ಪಿ. ಅನಿಲ್ ಕುಮಾರ್, ಪಿ.ಸಿ. ವಿಷ್ಣುನಾಥ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಎಂ. ಲಿಜು, ಟಿ. ಸಿದ್ದಿಕ್, ಕೆ.ಎ. ತುಳಸಿ ಮತ್ತು ಒ.ಜೆ. ಜನೀಶ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.