ನವದೆಹಲಿ,ಮೇ. 18 (DaijiworldNews/AK): ಭಾರತೀಯ ಚುನಾವಣಾ ಆಯೋಗ ಮಹಾರಾಷ್ಟ್ರದ 16 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದ್ದು, ಜೂನ್ 18ರಂದು ಮತದಾನ ಹಾಗೂ ಜೂನ್ 22ರಂದು ಮತ ಎಣಿಕೆ ನಡೆಯಲಿದೆ.

ಮಹಾರಾಷ್ಟ್ರದ 16 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳನ್ನು ಪ್ರತಿನಿಧಿಸುವ ಸದಸ್ಯರ ಅಧಿಕಾರಾವಧಿ 2022 ಮತ್ತು 2025ರ ನಡುವೆ ವಿವಿಧ ಹಂತಗಳಲ್ಲಿ ಮುಕ್ತಾಯಗೊಂಡಿದೆ ಎಂದು ಆಯೋಗ ಹೇಳಿದೆ.
ಚುನಾವಣಾ ವೇಳಾಪಟ್ಟಿಯ ಪ್ರಕಾರ, ಚುನಾವಣೆಗೆ ಅಧಿಕೃತ ಅಧಿಸೂಚನೆಯನ್ನು ಮೇ 25ರಂದು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಜೂ.1 ಕೊನೆಯ ದಿನಾಂಕವಾಗಿದ್ದು, ಜೂ.2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಜೂ.4ರವರೆಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದು. ಜೂ.18ರಂದು ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಎಲ್ಲಾ 16 ಸ್ಥಾನಗಳಿಗೆ ಮತದಾನ ನಡೆಯಲಿದೆ. ಜೂ.25ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳುವ ನಿರೀಕ್ಷೆಯಿದೆ .