ಬೆಂಗಳೂರು, ಮೇ. 19 (DaijiworldNews/TA): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಂಡ ದಿನವೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪತ್ನಿ ಸಮೇತ ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.

ಡಿಸಿಎಂ ಜೊತೆ ಅವರ ಆಪ್ತ ಹಾಗೂ ಕುಣಿಗಲ್ ಶಾಸಕ ಡಾ. ಎಚ್. ಡಿ. ರಂಗನಾಥ್ ಕೂಡ ಇದ್ದರು. ದೇವರ ದರ್ಶನದ ವೇಳೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು ಎನ್ನಲಾಗಿದೆ.
ಇದೇ ವೇಳೆ ತುಮಕೂರಿನಲ್ಲಿ ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶ ಇಂದು ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯ ಪ್ರಮುಖ ಯೋಜನೆಗಳು ಮತ್ತು ಸಾಧನೆಗಳನ್ನು ಜನರ ಮುಂದಿಡಲು ಸಜ್ಜಾಗಿದೆ.