ನವದೆಹಲಿ, ಮೇ. 22 (DaijiworldNews/TA): ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಕರ್ನಾಟಕದ 4 ಸ್ಥಾನಗಳಿಗೂ ಮತದಾನ ನಡೆಯಲಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಸೇರಿದಂತೆ ಹಲವು ಹಾಲಿ ಸದಸ್ಯರ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಒಟ್ಟು 24 ಸ್ಥಾನಗಳು ತೆರವಾಗಲಿವೆ.
ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಮತ ಎಣಿಕೆ ಕುರಿತ ಪೂರ್ಣ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಈ ಚುನಾವಣೆಯು ಹಲವು ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ಸಾಧ್ಯತೆ ಇದೆ.