ಬೆಂಗಳೂರು, ಮೇ. 23 (DaijiworldNews/AA): ಕರ್ನಾಟಕದಲ್ಲಿ ಮೇ 29ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.