ಬೆಂಗಳೂರು, ಮೇ. 27 (DaijiworldNews/AA): ಸಿದ್ದರಾಮಯ್ಯ ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತಗೊಂಡಿದೆ.

ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಮಾಹಿತಿ ದೊರೆತಿರಲಿಲ್ಲ. ಇದೀಗ ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್ಫಾಸ್ಟ್ ಸಭೆಯ ಬಳಿಕ ಸಿಎಂ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.