ಬಳ್ಳಾರಿ,ಮೇ. 28 (DaijiworldNews/AK): ಸಿಎಂ ಬದಲಾವಣೆ ಆದರೂ ಒಳ್ಳೆ ಆಡಳಿತ ನಡೆಸುತ್ತಾರೆ ಎನ್ನುವ ನಂಬಿಕೆ ಉಳಿದಿಲ್ಲ ಎಂದು ಕಾಂಗ್ರೆಸ್ ನಾಯಕತ್ವ ಬದಲಾವಣೆ ಬೆಳವಣಿಗೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿದ ವಿಜಯೇಂದ್ರ, ಸಿಎಂ ಬದಲಾವಣೆ ವಿಚಾರದಲ್ಲಿ ಬಿಜೆಪಿ ಬಳಸಿಕೊಳ್ಳಲ್ಲ. ರಾಜ್ಯ ಕಾಂಗ್ರೆಸ್ಗೆ 136 ಸ್ಥಾನ ನೀಡಿ ಸ್ಥಿರ ಸರ್ಕಾರ ನೀಡಿದೆ. ಈ ವಿಚಾರದಲ್ಲಿ ನಾವು ಯಾವುದೇ ಕಾರಣಕ್ಕೂ ಕೈ ಹಾಕಲ್ಲವೆಂದ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ಅಷ್ಟು ಬೇಗ ಬಗೆಹರಿಯೋ ಹಾಗೆ ಕಾಣಿಸ್ತಿಲ್ಲ. ವರ್ಷದಿಂದ ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಎರಡ್ಮೂರು ದಿನಗಳಿಂದ ಘಟನಾವಳಿಗಳು ನಡೆಯುತ್ತಿವೆ. ಮುಖ್ಯಮಂತ್ರಿ ರಾಜೀನಾಮೆ ಕೊಡ್ತಾರೆ ಎನ್ನುವ ಬೆಳವಣಿಗೆಗಳು ನಡೆಯುತ್ತಿವೆ. ಮುಂದಿನ ಬೆಳವಣಿಗೆ ಹೇಗೆ ನಡೆಯುತ್ತವೆ ಎನ್ನುವ ಊಹೆ ಯಾರಿಗೂ ಇಲ್ಲ. ರಾಜೀನಾಮೆ ಕೊಟ್ಟ ನಂತರ ಈ ಗೊಂದಲ ಮುಂದುವರೆಯುತ್ತವೆ ಎಂದರು.
ರಾಜ್ಯದ ಜನರ ಪರವಾಗಿ ಕಾಂಗ್ರೆಸ್ ಸರ್ಕಾರ ಶಾಪವಾಗಿ ಪರಿಣಮಿಸಿದೆ. ಮುಂದಿನ ಮುಖ್ಯಮಂತ್ರಿ ಆದರೂ ಒಳ್ಳೆಯ ಆಡಳಿತ ನಡೆಸ್ತಾರೆ ಎನ್ನುವ ನಂಬಿಕೆ ಉಳಿದಿಲ್ಲ. ಯಾರೇ ಮುಖ್ಯಮಂತ್ರಿ ಆದ್ರೂ ಸುಧಾರಣೆ ತರಲು ಸಾಧ್ಯವಿಲ್ಲ ಎಂದು ಟೀಕಿಸಿದರು.