ಜೈಪುರ/ನವದೆಹಲಿ,ಮೇ. 28 (DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಮಾನ ಮಾರ್ಗಮಧ್ಯೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡ್ ಆಗಿದೆ. ಇದರಿಂದ ಕೆಲವೊತ್ತು ಆತಂಕಕ್ಕೆ ಕಾರಣವಾಯ್ತು.

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ.
ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಇದ್ದರು.