ಪಾಟ್ನಾ, ಮೇ. 31 (DaijiworldNews/AA): ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿರುವ ಯುಪಿಎಸ್ಸಿಯಲ್ಲಿ ಉತ್ತೀರ್ಣರಾಗಲು ದೃಢಸಂಕಲ್ಪ, ಕಠಿಣ ಪರಿಶ್ರಮ ಅತ್ಯಗತ್ಯ. ಹೀಗೆ ತಮ್ಮ ಮೂರನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 114ನೇ ರ್ಯಾಂಕ್ ಗಳಿಸಿ ಉತ್ತೀರ್ಣರಾದ ವಿವೇಕ್ ಗರ್ಗ್ ಅವರ ಯಶೋಗಾಥೆ ಇದು.

ಐಐಟಿ ಪಟ್ನಾದ ಹಳೆಯ ವಿದ್ಯಾರ್ಥಿಯಾಗಿರುವ ವಿವೇಕ್ ಗರ್ಗ್ ಅವರು, 2021 ರಲ್ಲಿ ಕೆಮಿಕಲ್ ಇಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದರು. ಇನ್ನು ವಿವೇಕ್ ಅವರು ಕೋವಿಡ್ ಅವಧಿಯಲ್ಲಿಯೇ ತಾವು ಯುಪಿಎಸ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಬೇಕೆಂಬ ದೃಢ ನಿರ್ಧಾರ ಮಾಡಿದ್ದರು.
ದರಂತೆ ಯುಪಿಎಸ್ಸಿ ಪರೀಕ್ಷೆ ಬರೆದ ವಿವೇಕ್ ಗರ್ಗ್ ಅವರು ತಮ್ಮ ಮೊದಲ ಎರಡು ಪ್ರಯತ್ನಗಳಲ್ಲಿ ಉತ್ತೀರ್ಣರಾಗಲು ವಿಫಲರಾಗುತ್ತಾರೆ. ಅವರ ಯುಪಿಎಸ್ಸಿಗಾಗಿ 12 ರಿಂದ 14 ಗಂಟೆಗಳ ಕಾಲ ನಿಯಮಿತವಾಗಿ ಅಭ್ಯಾಸ ಮಾಡುತ್ತಿದ್ದರು. ಅವರ ಕಠಿಣ ಪರಿಶ್ರಮದ ಫಲವಾಗಿ 2024ರಲ್ಲಿ ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು 114ನೇ ರ್ಯಾಂಕ್ ಪಡೆದು ಐಪಿಎಸ್ ಗೆ ಆಯ್ಕೆಯಾಗುತ್ತಾರೆ
ಯುಪಿಎಸ್ಸಿ ಪರೀಕ್ಷೆ ಮೇಲೆ ಸಂಪೂರ್ಣ ಗಮನ ಹರಿಸಲು ವಿವೇಕ್ ಅವರು ಕಳೆದ ನಾಲ್ಕು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಿಂದ ಸಂಪೂರ್ಣವಾಗಿ ದೂರ ಉಳಿದಿದ್ದರು. ಅವರ ತ್ಯಾಗ ಹಾಗೂ ಕಠಿಣ ಪರಿಶ್ರಮದ ಫಲವಾಗಿ ಇಂದು ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.