ಕೋಲ್ಕತ್ತಾ, ಮೇ. 31 (DaijiworldNews/AA): ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನುಪೊಲೀಸರು ಬಂಧಿಸಿದ್ದಾರೆ.

ಬಂಧಿತರ ಪೈಕಿ ನಿರ್ಮಲ್ ಸೇನ್ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್ ದಾಸ್ ಸೋನಾರ್ಪುರದ ದಕ್ಷಿಣದ ಮಾಜಿ ಟಿಎಂಸಿ ಶಾಸಕಿ ಲವ್ಲಿ ಮೈತ್ರಾ ಅವರ ಆಪ್ತರು ಎಂದು ತಿಳಿದುಬಂದಿದೆ.
ಬಿಜೆಪಿಯವರು ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಘಟನೆ ನಡೆದ ವೇಳೆ ಪೊಲೀಸರು ಸ್ಥಳದಲ್ಲಿರಲಿಲ್ಲ. ಘಟನೆಯ ಇಡೀ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ. ಘಟನೆ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್ ರವಿಯವರಿಗೆ ತಿಳಿಸುತ್ತೇವೆ. ಇದು ಪೂರ್ವ ಯೋಜಿತ ಕೃತ್ಯ. ಬಿಜೆಪಿಗರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಲು ಸ್ಥಳೀಯ ಪೊಲೀಸರು ಅಲ್ಲಿನ ಜನರ ಗುಂಪನ್ನು ಕಳುಹಿಸಿ ಘಟನೆ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪ ಮಾಡಿದ್ದಾರೆ.