ಬೆಂಗಳೂರು, ಜೂ. 04 (DaijiworldNews/TA): ಕಾಂಗ್ರೆಸ್ ಕ್ಯಾಬಿನೆಟ್ನಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಬಿಜೆಪಿಯ ಆರೋಪಕ್ಕೆ ಇದೀಗ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ಸಚಿವ ಸಂಪುಟದಲ್ಲಿ ಇನ್ನೂ ಹಲವು ಸ್ಥಾನಗಳು ಖಾಲಿಯಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ವ್ಯಕ್ತಿಗಳಿಗೆ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮದು ಜನಸಾಮಾನ್ಯರಿಗಾಗಿ ಇರುವ ಸರ್ಕಾರ. ಇದು ಕೇವಲ ಒಬ್ಬ ವ್ಯಕ್ತಿಯಿಂದ ನಡೆಯುವಂಥದ್ದಲ್ಲ. ಸಂಪುಟ ವಿಸ್ತರಣೆಗೆ ಇನ್ನೂ ಅವಕಾಶಗಳಿದ್ದು, ಮುಂಬರುವ ದಿನಗಳಲ್ಲಿ ಅರ್ಹರಿಗೆ ಸೂಕ್ತ ಅಧಿಕಾರವನ್ನು ಹಂಚಲಾಗುವುದು.
ನಮ್ಮ ಸರ್ಕಾರ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ನಿರಂತರವಾಗಿ ಅವರಿಗೆ ಬೆಂಬಲ ನೀಡುತ್ತಾ ಬಂದಿದೆ. ಮಹಿಳೆಯರಿಗೆ ಎಲ್ಲ ರೀತಿಯಲ್ಲೂ ಆರ್ಥಿಕ ಮತ್ತು ಸಾಮಾಜಿಕ ಬೆಂಬಲ ನೀಡುವ ಮೂಲಕ ನಮ್ಮ ಸರ್ಕಾರ ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.