ಬೆಂಗಳೂರು, ಜೂ. 08 (DaijiworldNews/AA): ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ತರಕಾರಿ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಇದೀಗ ಅಕ್ಕಿ ಬೆಲೆಯೂ ಏರಿಕೆಯಾಗಿದೆ.

ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಇದರ ಜೊತೆಗೆ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕಡಿಮೆಯಾಗಿದೆ. ಹೀಗಾಗಿ ಅಕ್ಕಯ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ.
ಇನ್ನೂ ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಅಕ್ಕಿ ಕೊರತೆ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಏರಿಕೆಯಾಗುವ ಆತಂಕ ಸೃಷ್ಟಿಯಾಗಿದೆ.