ಬೆಂಗಳೂರು, ಜೂ. 08 (DaijiworldNews/AA): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಡಿಲಿಕೆ ಸಿಕ್ಕಿರುವುದರಿಂದ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಕಿರಿಕಿರಿ ಇಲ್ಲದೇ ಮುಕ್ತಾವಾಗಿ ದೇಶಾದ್ಯಂತ ಸಂಚರಿಸಬಹುದಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಯಡಿಯೂರಪ್ಪ ಅವರಿಗೆ ಷರತ್ತು ವಿಧಿಸಲಾಗಿತ್ತು. ಈ ಷರತ್ತು ಸಡಿಲಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಯಡಿಯೂರಪ್ಪನವರಿಗೆ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿ ಆದೇಶಿಸಿದೆ.