ಕೊಲ್ಕತ್ತಾ, ಜೂ. 09 (DaijiworldNews/AA): ನಾನು ಟಿಎಂಸಿಯಲ್ಲೇ ಇದ್ದಿದ್ದರೆ ಸುಪಾರಿ ಕಿಲ್ಲರ್ಗಳು ನನ್ನನ್ನು ಕೊಲ್ಲುವ ಸಾಧ್ಯತೆಯಿತ್ತು ಎಂದು ಟಿಎಂಸಿ ಮಾಜಿ ನಾಯಕ ಸುಖೇಂದು ಶೇಖರ್ ರಾಯ್ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸುಖೇಂದು ಶೇಖರ್ ರಾಯ್ ಅವರು ಇತ್ತೀಚೆಗೆ ಟಿಎಂಸಿ ಪಕ್ಷಕ್ಕೆ ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಪಕ್ಷದ ಕೆಲವು ನಿರ್ಧಾರಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ಆರಂಭಿಸಿದಾಗಿನಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿತ್ತು. ನಾನು ಪಕ್ಷದಲ್ಲೇ ಮುಂದುವರಿದಿದ್ದರೆ ನನ್ನನ್ನು ಕೊಲ್ಲುವ ಸಾಧ್ಯತೆಯಿತ್ತು. ನನ್ನ ಸುರಕ್ಷತೆಗಾಗಿ ಮತ್ತು ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ನಾನು ಪಕ್ಷದಿಂದ ಹೊರಬರಬೇಕಾಯಿತು" ಎಂದು ತಿಳಿಸಿದ್ದಾರೆ.
"ಟಿಎಂಸಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಉಳಿದಿಲ್ಲ, ಹಿರಿಯ ನಾಯಕರ ಆಲೋಚನೆಗಳಿಗೆ ಮತ್ತು ಸಲಹೆಗಳಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ. ಕೇವಲ ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಇಡೀ ಪಕ್ಷ ಕೆಲಸ ಮಾಡುತ್ತಿದೆ" ಎಂದಿದ್ದಾರೆ.