ಕೊಲ್ಕೋತಾ, ಜೂ. 10 (DaijiworldNews/AA): ಮಾಜಿ ಸಿಎಂ, ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಆಪ್ತೆಯಾಗಿದ್ದ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"ನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅದನ್ನು ತಕ್ಷಣ ಜಾರಿಗೆ ಬರುವಂತೆ ಅಂಗೀಕರಿಸಬಹುದು" ಎಂದು ಸುಷ್ಮಿತಾ ದೇವ್ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿಯ ನಿವಾಸದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಶರ್ಮಾ ಅವರೊಂದಿಗೆ ನಗುತ್ತಿರುವ ಸುಶ್ಮಿತಾ ದೇವ್ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.