ಬೆಂಗಳೂರು, ಜೂ. 10 (DaijiworldNews/AK): ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ಚುನಾಯಿತ ಪ್ರಧಾನಿಗಳಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್ ಅವರು ವಿವರಿಸಿದರು.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮೋದಿಜೀ ಅವರು ಮಾಡಿದ ಸೇವೆ ಐತಿಹಾಸಿಕ ದಾಖಲೆ ಎಂದು ಬಣ್ಣಿಸಿದರು. ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ದೇಶ ಸಮರ್ಥವಾಗಿ ಮುನ್ನಡೆ ಸಾಧಿಸಿದೆ. ರೈತರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಇದರಿಂದ ಪ್ರಯೋಜನ ಲಭಿಸಿದೆ.
ದೇಶದ ಅತ್ಯುತ್ತಮ ಜಿಡಿಪಿಯೇ ಇದಕ್ಕೆ ಸಮರ್ಥ ಉದಾಹರಣೆ ಎಂದು ವಿವರಿಸಿದರು. ಪ್ರಧಾನಿಯವರ ಆಯುಸ್ಸು, ಆರೋಗ್ಯ ವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.