ಮೈಸೂರು, ಜು. 10 (DaijiworldNews/AK): ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ ನಿಗದಿ ಆಗಿದೆ. ಅಕ್ಟೋಬರ್ 11 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ.

ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್ 11ಕ್ಕೆ ದಸರಾ ಉದ್ಘಾಟನೆಗೊಳ್ಳಲಿದೆ. ಅ.21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಆಗಸ್ಟ್ 26ರಂದು ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗುತ್ತದೆ. , ಮೈಸೂರು ಅರಮನೆಯ ಪ್ರವೇಶ ದ್ವಾರದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಗುವುದು. ಅಂದಿನಿಂದಲೇ ಆನೆಗಳಿಗೆ ತಾಲೀಮು ಮತ್ತು ವಿಶೇಷ ಪೌಷ್ಟಿಕ ಆಹಾರ ನೀಡುವ ಪ್ರಕ್ರಿಯೆ ಆರಂಭವಾಗಲಿದೆ.