ನವದೆಹಲಿ, ಜು. 10 (DaijiworldNews/AK): ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆದೆಹಲಿ ಹೈಕೋರ್ಟ್ನಿಂದ ಹಿನ್ನಡೆಯಾಗಿದೆ. ನ್ಯಾಯಾಲಯವು ಅವರ ವಿರುದ್ಧದ ಶಿಕ್ಷೆಯನ್ನು ಎತ್ತಿಹಿಡಿದಿದ್ದು, 6 ತಿಂಗಳ ಜೈಲು ಶಿಕ್ಷೆಯನ್ನು 3 ತಿಂಗಳಿಗೆ ಇಳಿಸಿ ಆದೇಶ ನೀಡಿದೆ.

ರಾಜ್ಪಾಲ್ ಯಾದವ್ ತಮ್ಮನ್ನು ಅಪರಾಧಿಗಳ ಪರೀಕ್ಷಾ ಕಾಯ್ದೆ ಅಡಿಯಲ್ಲಿ ಬಿಡುಗಡೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ವಿಚಾರಣೆಯ ವೇಳೆ ಅವರ ನಡೆನುಡಿಯನ್ನು ಪರಿಗಣಿಸಿದ ನ್ಯಾಯಾಲಯ, ಆ ಸೌಲಭ್ಯ ನೀಡಲು ನಿರಾಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಹಣವನ್ನು ಪಾವತಿಸುವುದಾಗಿ ರಾಜ್ಪಾಲ್ ಯಾದವ್ ಹಲವು ಬಾರಿ ಭರವಸೆ ನೀಡಿದ್ದರು. ಆದರೆ ಹಲವು ಅವಕಾಶಗಳನ್ನು ನೀಡಿದರೂ ಅವರು ಮಾತು ಉಳಿಸಿಕೊಳ್ಳಲಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಪಾಲ್ ಯಾದವ್ ಅವರ ಪತ್ನಿ ರಾಧಾ ಯಾದವ್ ಅವರಿಗೂ ಪರಿಹಾರ ಮೊತ್ತ ಪಾವತಿಸಲು ದೆಹಲಿ ಹೈಕೋರ್ಟ್ ಸೂಚಿಸಿದೆ. ಈ ಹಿಂದೆ ರಾಜ್ಪಾಲ್ ಯಾದವ್ ಪಾವತಿಸಿದ್ದ ಮೊತ್ತವನ್ನು ಅಂತಿಮ ಲೆಕ್ಕದಲ್ಲಿ ಹೊಂದಾಣಿಕೆ ಮಾಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.