ನವದೆಹಲಿ, ಜು. 11 (DaijiworldNews/AA): ನೀಟ್-ಯುಜಿಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ 13 ಆರೋಪಿಗಳ ನ್ಯಾಯಾಂಗ ಬಂಧನವನ್ನು ಜು.24ರವರೆಗೆ ವಿಸ್ತರಿಸಿ ದೆಹಲಿಯ ರೌಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.

ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕೋರ್ಟ್ ವಿಚಾರಣೆ ವೇಳೆ ಆರೋಪಿಗಳು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.
ಅರ್ಜಿ ವಿಚಾರಣೆ ಸಿಬಿಐ ಅಧಿಕಾರಿಗಳು, ವಿಚಾರಣೆ ಇನ್ನೂ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಕೋರ್ಟ್ ಗೆ ತಿಳಿಸಿದ್ದಾರೆ. ಸಿಬಿಐ ಮನವಿಯಂತೆ ಒಟ್ಟು 13 ಆರೋಪಿಗಳ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಸ್ತರಣೆ ಮಾಡಿದೆ.