ನವದೆಹಲಿ, ಜು. 12 (DaijiworldNews/AA): ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್ಎಸ್ ಗ್ಯಾಲಕ್ಸಿ ಮೇಲೆ ಇರಾನ್ ನಡೆಸಿದ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

"ಹಡಗಿನಲ್ಲಿ 11 ಭಾರತೀಯ ನಾವಿಕರಿದ್ದರು. ಅವರಲ್ಲಿ ಇಲ್ಲಿಯವರೆಗೆ 10 ಜನರನ್ನು ರಕ್ಷಿಸಲಾಗಿದೆ. ಆದರೆ 1 ಭಾರತೀಯ ಪ್ರಜೆ ಕಾಣೆಯಾಗಿದ್ದಾರೆ" ಎಂದು ಮಾಹಿತಿ ನೀಡಿದೆ.
"ಒಮಾನ್ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಓಮನ್ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಮನ್ವಯ ಸಾಧಿಸುತ್ತಿದೆ. ಓಮನ್ ಅಧಿಕಾರಿಗಳ ಬೆಂಬಲಕ್ಕಾಗಿ ನಾವು ಅವರಿಗೆ ಧನ್ಯವಾದ ಹೇಳುತ್ತೇವೆ" ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.