ಬೆಂಗಳೂರು, ಜು. 13 (DaijiworldNews/AA): ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ ಪ್ರಕರಣವನ್ನು ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ರಾಜ್ಯಪಾಲರು ಮಹತ್ವದ ಕ್ರಮ ಕೈಗೊಂಡಿದ್ದಾರೆ.