ಬೆಂಗಳೂರು, ಜು. 14 (DaijiworldNews/AA): ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ಐಎ ಕೋರ್ಟ್ ತೀರ್ಪು ಪ್ರಕಟಿಸಿದೆ.

ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್ ಶಿಕ್ಷೆಗೊಳಗಾದ ಉಗ್ರ.
2020 ರಂದು ರಾಜ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಎನ್ಐಎ ಪ್ರಕರಣವನ್ನು ಕೈಗೆತ್ತಿಕೊಂಡು ಒಟ್ಟು ೨೦ ಆರೋಪಿಗಳನ್ನು ಬಂಧಿಸಿತ್ತು. ಆರೋಪಿಗಳನ್ನ ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು.
ಇದೀಗ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್ ಗೆ ಶಿಕ್ಷೆ ಪ್ರಕಟವಾಗಿದೆ. ಕೋರ್ಟ್ ವಿಚಾರಣೆಯ ವೇಳೆ ಹನೀಫ್ ತಪ್ಪೊಪ್ಪಿಕೊಂಡಿದ್ದ. ಆತನಿಗೆ 7 ವರ್ಷಗಳ ಜೈಲು ಶಿಕ್ಷೆ, 48,000 ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.