ನವದೆಹಲಿ, ಜು. 17 (DaijiworldNews/AA): ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಿಂದ ಆರಂಭವಾಗಲಿದ್ದು, ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷಗಳ ಒಕ್ಕೂಟದ ನಡುವೆ ಭೀಕರ ರಾಜಕೀಯ ಸಮರಕ್ಕೆ ವೇದಿಕೆ ಸಜ್ಜಾಗಿದೆ.

ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ನಿರ್ಧರಿಸಿರುವ ಪ್ರಮುಖ ಹೊಸ ಮಸೂದೆಗಳು:
ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026: ತೆರಿಗೆ ವ್ಯವಸ್ಥೆಯಲ್ಲಿನ ಹೊಸ ಬದಲಾವಣೆಗಳಿಗೆ ಸಂಬಂಧಿಸಿದ್ದಾಗಿದೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2026: ಎಂಎಸ್ಎಂಇ ವಲಯಕ್ಕೆ ಬೂಸ್ಟ್ ನೀಡುವ ಕಾಯ್ದೆ.
ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ, 2026.
ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, 2026.
ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026.
ಇವುಗಳ ಜೊತೆಗೆ ಈ ಹಿಂದೆ ಮಂಡನೆಯಾಗಿ ಬಾಕಿ ಉಳಿದಿರುವ 'ವಿದೇಶಿ ಕೊಡುಗೆ ನಿಯಂತ್ರಣ ತಿದ್ದುಪಡಿ ಮಸೂದೆ' ಹಾಗೂ 'ವಿಕ್ಷಿತ್ ಭಾರತ್ ಶಿಕ್ಷಾ ಅಧಿಷ್ಠಾನ ಮಸೂದೆ'ಗಳನ್ನು ಕೂಡ ಸರ್ಕಾರ ಈ ಅಧಿವೇಶನದಲ್ಲಿ ಇತ್ಯರ್ಥ ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.