ಪಾಟ್ನಾ, ಜು. 18 (DaijiworldNews/AA): ಯುಪಿಎಸ್ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಭ್ಯರ್ಥಿಗಳ ಕನಸಾಗಿರುತ್ತದೆ. 2025ರ ಯುಪಿಎಸ್ಸಿ ಪರೀಕ್ಷೆಯಲ್ಲಿ 10ನೇ ರ್ಯಾಂಕ್ ಪಡೆದು ಉತ್ತೀರ್ಣರಾದ ಉಜ್ವಲ್ ಪ್ರಿಯಾಂಕ್ ಅವರ ಯಶೋಗಾಥೆ ಇದು.

ಪಾಟ್ನಾ ಮೂಲದ ಉಜ್ವಲ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಜ್ಞಾನ ನಿಕೇತನ ಶಾಲೆಯಲ್ಲಿ ಪೂರ್ಣಗೊಳಿಸಿದರು. ಬಳಿಕ ಸೇಂಟ್ ಮೈಕೇಲ್ಸ್ ಹೈಸ್ಕೂಲ್ನಲ್ಲಿ ಪ್ರೌಢ ಶಿಕ್ಷಣ ಪಡೆದರು. ಉನ್ನತ ಶಿಕ್ಷಣಕ್ಕಾಗಿ ಅವರು ಜೈಪುರಕ್ಕೆ ತೆರಳಿ ಜೆಇಸಿಆರ್ಸಿ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಬಿ.ಟೆಕ್ ಪದವಿ ವ್ಯಾಸಂಗ ಮಾಡಿದರು.
2022ರಲ್ಲಿ ಪದವಿ ಪೂರ್ಣಗೊಳಿಸಿದ ಉಜ್ವಲ್, ಬಳಿಕ ಯುಪಿಎಸ್ಸಿ ಪರೀಕ್ಷೆಯತ್ತ ಸಂಪೂರ್ಣ ಗಮನ ಹರಿಸಿದರು. ಉಜ್ವಲ್ ಅವರು ಸಮಾಜಶಾಸ್ತ್ರವನ್ನು ತಮ್ಮ ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡಿದ್ದರು. 2025ರಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆದ ಅವರು 10 ಅಖಿಲ ಭಾರತ ರ್ಯಾಂಕ್ ಪಡೆದು ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ.