ನವದೆಹಲಿ, ಜು. 18 (DaijiworldNews/AA): ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಬೆನ್ನಲ್ಲೇ ಹೋರಾಟವನ್ನು ಮುಂದುವರಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಘೋಷಿಸಿದ್ದು, ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

"ನಾನು ಇಂದಿನಿಂದ ನನ್ನ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುತ್ತಿದ್ದೇನೆ. ಯಾರೂ ಹಿಂದೆ ಸರಿಯಬೇಡಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಈ ಚಳುವಳಿ ದೊಡ್ಡದಾಗಿ ಬೆಳೆಯುತ್ತದೆ. ಅವರು ಗಂಭೀರ ತಪ್ಪು ಮಾಡಿದ್ದಾರೆ. ಎಲ್ಲರೂ ಜಂತರ್ ಮಂತರ್ಗೆ ಬರಬೇಕೆಂದು ನಾನು ಒತ್ತಾಯಿಸುತ್ತೇನೆ; ನಮ್ಮ ಚಳುವಳಿ ಇಲ್ಲಿಂದ ಮುಂದುವರಿಯುತ್ತದೆ ಮತ್ತು ಜುಲೈ 20 ರಂದು ನಿಗದಿಯಾಗಿರುವ ನಮ್ಮ ಮೆರವಣಿಗೆಯೊಂದಿಗೆ ನಾವು ಮುಂದುವರಿಯುತ್ತೇವೆ" ಎಂದು ಅಭಿಜೀತ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
"ಅಭಿಜೀತ್ ದಿಪ್ಕೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜುಲೈ 20 ರಂದು ನಡೆಯಲಿರುವ 'ಚಲೋ ಸಂಸದ್' ಮೆರವಣಿಗೆ ಯೋಜಿಸಿದಂತೆ ನಡೆಯಲಿದೆ" ಎಂದು ಸಿಜೆಪಿ ಎಕ್ಸ್ ನಲ್ಲಿ ತಿಳಿಸಿದೆ. ಇದೀಗ ಅಭಿಜೀತ್ ದೀಪ್ಕೆ ಅಧಿಕೃತವಾಗಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಣೆ ಮಾಡಿದ ಹಿನ್ನೆಲೆ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.