ನವದೆಹಲಿ, ಜು. 20 (DaijiworldNews/AK): ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಭಾರತ ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ ಎಂದು ಹೇಳಿದ್ದಾರೆ.

ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಅಧಿವೇಶನ ಫಲಪ್ರದವಾಗಲಿ ಎಂದು ಆಶಿಸಿದರು.
ಮಾನ್ಸೂನ್ ಹೇಗೆ ದೇಶಕ್ಕೆ ಅಗತ್ಯವೋ, ಅದೇ ರೀತಿ ಸಂಸತ್ತಿನ ಮಾನ್ಸೂನ್ ಅಧಿವೇಶನವೂ ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು. ಭಾರತ ಕಳೆದ ಕೆಲವು ತಿಂಗಳಲ್ಲಿ ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ಪಡುವಂತಿವೆ ಎಂದು ತಿಳಿಸಿದರು.
ಇತ್ತೀಚೆಗೆ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಕೈರೂಟ್ ಸಾಧಿಸಿದ ಯಶಸ್ಸನ್ನು ಉಲ್ಲೇಖಿಸಿ, ಇಂತಹ ಯುವಕರು ದೇಶಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾರೆ. ನಾನು 56 ವರ್ಷದ ಯುವಕರ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದರು.