ಚೆನ್ನೈ, ಜು. 22 (DaijiworldNews/AA): ನೀಟ್ ಪ್ರಶ್ನೆ ಪರೀಕ್ಷೆ ಸೋರಿಕೆ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.

ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಶಿಕ್ಷಣವನ್ನು ಕೇಂದ್ರದ ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು. ಸಾಧ್ಯವಾಗದಿದ್ದರೆ, ಮಧ್ಯಂತರ ಕ್ರಮವಾಗಿ ವಿಶೇಷ ವ್ಯವಸ್ಥೆ ರೂಪಿಸಿ ರಾಜ್ಯಗಳಿಗೆ ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಟಿವಿಕೆ ಹೇಳಿಕೆ ಪ್ರಕಟಿಸಿದೆ.
ನೀಟ್ ರದ್ದು ಮಾಡುತ್ತೇವೆ ಎಂದು ಹೇಳಿ ಜನರ ಮತ ಪಡೆಯುವ ರಾಜಕೀಯವನ್ನು ನಾವು ಮಾಡುವುದಿಲ್ಲ ಎಂದು ಪರೋಕ್ಷವಾಗಿ ಡಿಎಂಕೆ ಪಕ್ಷವನ್ನು ಟಿವಿಕೆ ಟೀಕಿಸಿದೆ.