ನವದೆಹಲಿ, ಜು. 22 (DaijiworldNews/AK): ಜುಲೈ 20ರಂದು ʻಸಂಸತ್ ಚಲೋʼ ಮೆರವಣಿಗೆ ವೇಳೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆಧ ಪೊಲೀಸ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು, ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ 4 ವಾರಗಳೊಳಗೆ ಪ್ರತಿಜ್ಞಾಪತ್ರ (ಕೌಂಟರ್ ಅಫಿಡವಿಟ್) ಸಲ್ಲಿಸುವಂತೆ ಸೂಚಿಸಿದೆ
ಇದೇ ವೇಳೆ, ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು, ವಿಡಿಯೋಗ್ರಫಿ, ಬಾಡಿ-ಕ್ಯಾಮ್ ದೃಶ್ಯಗಳು ಹಾಗೂ ಇತರೆ ಎಲ್ಲಾ ದಾಖಲೆಗಳನ್ನ ಸಂರಕ್ಷಿಸುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನ ಸೆಪ್ಟೆಂಬರ್ 11ಕ್ಕೆ ನಿಗದಿಪಡಿಸಲಾಗಿದೆ.
ದೆಹಲಿ ಪೊಲೀಸ್ ಹಾಗೂ ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ವಾದ ಮಂಡಿಸಿದರೆ, ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಎನ್. ಹರಿಹರನ್, ಗೋಪಾಲ್ ಶಂಕರನಾರಾಯಣನ್ ಮತ್ತು ವಿಕಾಸ್ ಸಿಂಗ್ ಹಾಜರಾಗಿದ್ದರು.