ಬೆಂಗಳೂರು, ಜು. 23 (DaijiworldNews/AK): ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಪಕ್ಷದ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾಗಿದ್ದ ಕೊತ್ವಾಲ್ ರಾಮಚಂದ್ರನ ಶಿಷ್ಯರಾದ ಕಾಂಗ್ರೆಸ್ಸಿಗರು ನಮ್ಮ ಪಕ್ಷದ ಶಾಸಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮುಖಂಡರು ಖಂಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಮತ್ತು ಧರಣಿ ನಡೆಯಿತು.
ಕೊತ್ವಾಲ್ ರಾಮಚಂದ್ರನ ಗೂಂಡಾ ಸಂಸ್ಕಂತಿಯನ್ನು ಬಿತ್ತುವ ಕೆಲಸವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಲಾಯಿತು. ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.