ನವದೆಹಲಿ, ಜು. 24 (DaijiworldNews/AA): ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ರವನೀತ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರವನೀತ್ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರವನೀತ್ ಸಿಂಗ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪಂಜಾಬ್ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ ಅವರು 2024 ರಲ್ಲಿ ಬಿಜೆಪಿ ಸೇರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ವಿಫಲರಾದರು. ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.