ನವದೆಹಲಿ, ಜು. 25 (DaijiworldNews/AK): ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ. ಜೋಶಿ ಪ್ರಸ್ತುತ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದಾರೆ.
ದಿಲ್ಲಿಯ ಜಂತರ್ ಮಂತರ್ನಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ನಡೆಯುತ್ತಿದ್ದ ಪ್ರತಿಭಟನೆಯ 35ನೇ ದಿನ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಸಲ್ಲಿಸಿದ್ದರು.