ಬೆಂಗಳೂರು, ಸೆ. 01 (DaijiworldNews/AA): ಮುಡಾ ಹಗರಣದ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ತೀರ್ಪು ಸೆ.2ಕ್ಕೆ ನಿಗದಿ ಪಡಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಡಾ ಅಕ್ರಮ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಅಂಗೀಕರಿಸಿತ್ತು. ಆದರೆ ಬಿ-ರಿಪೋರ್ಟ್ ಅಂಗೀಕಾರ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಅರ್ಜಿಯ ತೀರ್ಪನ್ನು ಸೆ.2ಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಕಾಯ್ದಿರಿಸಿದೆ.
ಮುಡಾ ಪ್ರಕರಣದ ಬಿ-ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಡಿ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳನ್ನು ಪರಿಗಣಿಸಿಲ್ಲ. ಕಾನೂನು ಬಾಹಿರ ಡಿನೋಟಿಫಿಕೇಷನ್ ಬಗ್ಗೆ ತನಿಖೆ ಸಮರ್ಪಕವಾಗಿಲ್ಲ. ಭೂ ಪರಿವರ್ತನೆ ಕಾನೂನುಬಾಹಿರವೆಂಬುದನ್ನು ಪರಿಗಣಿಸಿಲ್ಲ ಎಂದು ವಾದ ಮಂಡಿಸಲಾಗಿತ್ತು. ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.