ನವದೆಹಲಿ, ಸೆ. 05 (DaijiworldNews/AK): ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತ 82 ಶಿಕ್ಷಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಕರು ಕೇವಲ ಪಠ್ಯ ಮತ್ತು ಪರೀಕ್ಷಾ ಅಂಕಗಳ ಮೇಲೆ ಮಾತ್ರ ಗಮನಹರಿಸದೆ, ಮಕ್ಕಳ ಮಾನಸಿಕ ಬೆಳವಣಿಗೆ ಹಾಗೂ ನಡವಳಿಕೆಗಳ ಮೇಲೂ ನಿಗಾ ಇಡಬೇಕು ಎಂದು ಕರೆ ನೀಡಿದ್ದಾರೆ.

ವಿದ್ಯಾರ್ಥಿಗಳ ನಡವಳಿಕೆಯಲ್ಲಿ ಹಠಾತ್ ಬದಲಾವಣೆ ಕಂಡುಬಂದರೆ, ಅವರು ಸ್ನೇಹಿತರಿಂದ ದೂರ ಸರಿಯುತ್ತಿದ್ದರೆ ಅಥವಾ ಮಾದಕ ವ್ಯಸನದಂತಹ ದುಶ್ಚಟಗಳಿಗೆ ಜಾರುವ ಲಕ್ಷಣಗಳಿದ್ದರೆ ಅದನ್ನು ನಿರ್ಲಕ್ಷಿಸದೆ ತಕ್ಷಣ ಪೋಷಕರೊಂದಿಗೆ ಮಾತನಾಡಿ ಸರಿಪಡಿಸಬೇಕು ಎಂದರು.
ಹೆಚ್ಚುತ್ತಿರುವ ಸ್ಕ್ರೀನ್ ಸಮಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ, ಮಕ್ಕಳನ್ನು ಮೊಬೈಲ್ನಿಂದ ದೂರವಿಡಲು ಕ್ರೀಡೆ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಲು ಸಲಹೆ ನೀಡಿದರು.
ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರ ಮುಗ್ಧ ಬಾಲ್ಯವನ್ನು ಸಂರಕ್ಷಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.