ಚೆನ್ನೈ, ಸೆ. 07 (DaijiworldNews/AK): ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಬೇಡಿ. ಬಳಸಿದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಜೋಸೆಫ್ ವಿಜಯ್ ನಟಿ ತ್ರಿಷಾ ವಿರುದ್ಧ ಡಬಲ್ ಮೀನಿಂಗ್ ಮಾತನಾಡಿದ್ದ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜಕೀಯ ಟೀಕೆ ಮಾಡಿ. ಸರ್ಕಾರದ ಯೋಜನೆಗಳನ್ನು ಟೀಕಿಸಿ. ಆದರೆ ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಮಹಿಳೆಯರ ನಿಂದನೆ ಬೇಡ. ರಾಜಕೀಯ ಟೀಕೆ ಮಾಡುವಾಗ ಮಹಿಳೆಯರಿಗೆ ಅಗೌರವ ಬೇಡ. ಮಹಿಳೆಯನ್ನು ಗೌರವಿಸಿ. ಮಾನಹಾನಿಯಾಗುವಂತ ಹೇಳಿಕೆ ನೀಡಿದರೆ ಕಾನೂನು ಕ್ರಮ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಜಯಲಲಿತಾ ಅವರಿಗೆ ಅವಮಾನಿಸಿದ್ದ ಬಗ್ಗೆ ನೆನಪಸಿಕೊಂಡು ಮಾತನಾಡಿದ ಅವರು, ನನ್ನ ರಾಜಕೀಯ ಗೆಲುವಿನ ಹಿಂದಿನ ಪ್ರಮುಖ ಕಾರಣವೆಂದರೆ ಅದು ಮಹಿಳೆಯರು. ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡುವುದನ್ನು ನಾನು ಸಹಿಸಲ್ಲ. ರಾಜಕೀಯದಲ್ಲಿ ಯಾರೂ ಯಾರನ್ನು ಬೇಕಾದರೂ ಟೀಕಿಸಬಹುದು. ಎಲ್ಲವನ್ನು ಜನ ನೋಡುತ್ತಿರುತ್ತಾರೆ. ಆದರೆ ರಾಜಕೀಯ ಹೆಸರಿನಲ್ಲಿ ನಾವು ನಮ್ಮ ಜನರನ್ನು, ಮಹಿಳೆಯರನ್ನು ವೈಯಕ್ತಿಕವಾಗಿ, ಕೀಳಾಗಿ ಟೀಕಿಸುವುದು ಸರಿಯಲ್ಲ. ಹಾಗೇ ಮಾತನಾಡಬೇಡಿ ಎಂದು ವಿನಂತಿಸಿದ್ದಾರೆ.