ಬೆಂಗಳೂರು, ಸೆ. 09 (DaijiworldNews/AK): ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಡೀಲ್ಮಾಸ್ಟರ್ ಬಸವರಾಜ್ ಕನ್ನಾಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇವತ್ತು ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ 1ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಸದ್ಯ ಕಸ್ಟಡಿಗೆ ಬೇಡ, ಬೇಕಾದ್ರೆ ಮುಂದೆ ಮತ್ತೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಹೇಳಿದೆ. ಹೀಗಾಗಿ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ
ಇನ್ನು, ನಾಪತ್ತೆಯಾಗಿರುವ ಕೆಪಿಎಸ್ಸಿ ಸದಸ್ಯೆ ಶಾಂತ ಹೊಸಮನಿ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ. ನಾಪತ್ತೆಯಾಗಿರೋ ಶಾಂತ ಹೊಸಮನಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಮತ್ತಿಕೆರೆ, ನಾಗರಬಾವಿ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಶಾಂತ ಹೊಸಮನಿ ಕಡೆಯಿಂದ ನೇಮಕವಾಗಿರುವ ಅಭ್ಯರ್ಥಿ ಮಮತಾ ಎಂಬವರ ಕಲಬುರಗಿ ನಗರದ ನ್ಯೂ ಓಜಾ ಲೇಔಟ್ನಲ್ಲಿರುವ ಮನೆ ಮೇಲೂ ಸಿಐಡಿ ದಾಳಿ ಮಾಡಿದೆ.