ಚೆನ್ನೈ, ಸೆ.19 (DaijiworldNews/AA): ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿಯನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡು ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಮಾತನಾಡಿದ ತಮಿಳುನಾಡು ಶಿಕ್ಷಣ ಸಚಿವ ರಾಜ್ ಮೋಹನ್, "ಜೈಲಿನಲ್ಲಿರುವ ಕೈದಿಗಳಿಗೂ ಚಿಕನ್ ಬಿರಿಯಾನಿ ಸಿಗುತ್ತದೆ. ಹಾಗಾದರೆ ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದುವ ಮುಗ್ಧ ವಿದ್ಯಾರ್ಥಿಗಳಿಗೆ ಆ ಭಾಗ್ಯ ಸಿಗಬಾರದೇ?" ಎಂದು ಪ್ರಶ್ನಿಸಿದ್ದಾರೆ.
"ನಾವು ತರಲು ಮುಂದಾಗುತ್ತಿರುವ ಈ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಬೆಳೆಯುವ ಮಕ್ಕಳಿಗೆ ಸಾಕಷ್ಟು ಪ್ರಮಾಣದ ಪ್ರೋಟೀನ್ ಮತ್ತು ಪೌಷ್ಟಿಕಾಂಶದ ಅವಶ್ಯಕತೆ ಇರುತ್ತದೆ. ತಮಿಳುನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಯ ಜೊತೆಗೆ ಪೌಷ್ಟಿಕಾಂಶದ ಕ್ರಾಂತಿಯೂ ಕೈಜೋಡಿಸಿ ಸಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಚಿಕನ್ ಬಿರಿಯಾನಿ ತಿನ್ನದವರಿಗೆ ವೆಜ್ ತಿನ್ನಬಹುದು" ಎಂದು ತಿಳಿಸಿದ್ದಾರೆ.
ಈ ಹಿಂದೆ ಸಿಎಂ ವಿಜಯ್ ಜೋಸೆಫ್ ಸರ್ಕಾರಿ ಶಾಲೆ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವಾಗಿ ಘೋಷಿಸಿದ್ದರು. ಅದರಂತೆ ಇದೀಗ ಈ ಯೋಜನೆ ಪ್ರಯೋಗಿಕವಾಗಿ ಶುರುವಾದಂತಿದೆ.