ಹುಬ್ಬಳ್ಳಿ, ಅ.15 (DaijiworldNews/TA): ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದ ಪರಿಣಾಮ ಚಾಲಕ ಸೇರಿದಂತೆ 15 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಕ್ರಾಸ್ ಬಳಿ ನಡೆದಿದೆ.

ಮುಂಬೈನಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಛಬ್ಬಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ. ಅಪಘಾತದ ವೇಳೆ ಬಸ್ನಲ್ಲಿ ಒಟ್ಟು 26 ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದಲ್ಲಿ ಚಾಲಕ ಸೇರಿದಂತೆ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.