ಬೆಳಗಾವಿ, ಎ.13 (DaijiworldNews/PY) : ಬೆಳಗಾವಿ ಜಿಲ್ಲೆಯಲ್ಲಿ ಎಂಎಸ್ಐಎಲ್ ಸೇರಿದಂತೆ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ವಿಚಾರದ ಬಗ್ಗೆ ಸಿಎಂ ಅವರೊಂದಿಗೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ಕೊರೊನಾ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿ ಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಹಾಗಾಗಿ ಅಂತವರನ್ನು ತಕ್ಷಣವೇ ಪತ್ತೆ ಹಚ್ಚುವ ಕಾರ್ಯ ನಡೆಸಬೇಕು. ಇಲ್ಲವಾದಲ್ಲಿ ಸೋಂಕು ಮತ್ತಷ್ಟು ವ್ಯಾಪಿಸುತ್ತದೆ. ಇಂತಹ ಸ್ಥಿತಿ ಯಾವುದೇ ಕಾರಣಕ್ಕೂ ಉಂಟಾಗಬಾರದು ಎಂದರು.